- Advertisement -
- Advertisement -



ಬಂಟ್ವಾಳ: ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ, ಮಂಚಿ ಮುಡಿಪು ರಸ್ತೆಯ, ಕಂಡತಟ್ಟು ಗುಡ್ಡ ಎಂಬಲ್ಲಿ ನಡೆದಿದೆ.
ಕಂಡತಟ್ಟು ಗುಡ್ಡ ಎಂಬಲ್ಲಿ, ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು, ಈ ವೇಳೆ ಕೃತ್ಯದಲ್ಲಿ ತೊಡಗಿದ್ದ ಆರೋಪಿಗಳು ಕೆಂಪು ಕಲ್ಲು ಗಣಿಗಾರಿಕೆಗೆ ಬಳಸುತ್ತಿರುವ ಯಂತ್ರವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಯಂತ್ರವನ್ನು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








