Friday, July 24, 2026
spot_imgspot_img
spot_imgspot_img

ಬಂಟ್ವಾಳ: ಬೈಕ್‌ಗೆ ಕಾರು ಢಿಕ್ಕಿ; ಸವಾರ ಮೃತ್ಯು

- Advertisement -
- Advertisement -

ಬಂಟ್ವಾಳ: ಬೈಕ್ ಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾಮಾಜೆ ಕ್ರಾಸ್ ಬಳಿ ನಡೆದಿದೆ. ವಾಮದಪದವು ಸಮೀಪದ ಪಾಂಗಲ್ಪಾಡಿ ನಿವಾಸಿ ಶ್ರೀನಿವಾಸ ಉಡುಪ (58) ಮೃತ ದುರ್ದೈವಿ.

ವಾಮದಪದವನಿಂದ ಅವರು ಬಿಸಿರೋಡಿಗೆ ಬರುತ್ತಿದ್ದ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಶ್ರೀನಿವಾಸ ಅವರು ಬಂಟ್ವಾಳ ದಿಂದ ಬರುತ್ತಿದ್ದು, ಕಾಮಾಜೆ ಕ್ರಾಸ್ ಬಳಿ ತಿರುಗಿಸಿದ ವೇಳೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಗಂಭೀರವಾಗಿ ಗಾಯವಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಮೃತರು ಅಡುಗೆ
ವೃತ್ತಿಯವರಾಗಿದ್ದು, ದೇವಸ್ಥಾನದಲ್ಲಿ ಪರಿಚಾರಕಾಗಿದ್ದರು. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್‌ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!