- Advertisement -
- Advertisement -
ಬಂಟ್ವಾಳ: ಜೀಪ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಮಣಿಹಳ್ಳ ಸಮೀಪದ ನಾವೂರಿನ ಮಸೀದಿ ಎದುರಿನಲ್ಲಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ನಾವೂರಿನ ನಿವಾಸಿ ಅಬ್ಬಾಸ್ (60) ಎನ್ನಲಾಗಿದೆ.
ಜೀಪ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತರಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಅವರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -