Friday, March 29, 2024
spot_imgspot_img
spot_imgspot_img

ಬಂಟ್ವಾಳ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ; ಸಾವಿರಾರು ಮೌಲ್ಯದ ಗಾಂಜಾ ವಶಕ್ಕೆ

- Advertisement -G L Acharya panikkar
- Advertisement -

ಬಂಟ್ವಾಳ: ಸಜಿಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಿ ಆತನಿಂದ ಮಾರಾಟಕ್ಕೆ ತರುತ್ತಿದ್ದ ಸುಮಾರು 30,000/- ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಬಂಟ್ವಾಳ ನಗರ ಪೊಲೀಸರು ಮತ್ತು ಬಂಟ್ವಾಳ ಡಿವೈಎಸ್ಪಿ ರವರ ವಿಶೇಷ ತಂಡ ಯಶಸ್ವಿಯಾಗಿದೆ.

ಬಂಟ್ವಾಳ ತಾಲೂಕಿನ ಸಜಿಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಇಲ್ಯಾಸ್ (37) ಎಂಬಾತನೇ ಆರೋಪಿ. ಈತನು ಕೇರಳದ ಉಪ್ಪಳ ಕಡೆಯಿಂದ ಗಾಂಜಾವನ್ನು ತಂದು ಸಜಿಪ ಕಡೆಗಳಲ್ಲಿ ಪ್ಯಾಕೆಟ್ಗಳಾಗಿ ಮಾಡಿ ಮಾರಾಟ ಮಾಡುತ್ತಿರುವುದಾಗಿ ತನಿಖೆಯಲ್ಲಿ ತಿಳಿದು ಬಂದಿದೆ.

ಈತನಿಂದ 1.400 ಕೆ.ಜಿ ಗಾಂಜಾ ಮತ್ತು ಸಾಗಾಟಕ್ಕೆ ಬಳಸಿದ ಆಕ್ಟಿವಾ ಹೋಂಡಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸ್ವಾಧೀನ ಪಡಿಸಿಕೊಂಡ ಸೊತ್ತುಗಳ‌ ಒಟ್ಟು ಮೌಲ್ಯ ರೂ 80,000/- ಆಗಿರುತ್ತದೆ.

ಈ ಕಾರ್ಯಾಚರಣೆಯನ್ನು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಹೃಷಿಕೇಷ್ ಭಗವಾನ್ ಸೋನಾವಣೆ, ಐ.ಪಿ.ಎಸ್, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಭಾಸ್ಕರ ಒಕ್ಕಲಿಗ ರವರ ನಿರ್ದೇಶನದಂತೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಾದ ಶ್ರೀ ವೆಲೈಂಟೈನ್ ಡಿಸೋಜಾರವರ ಆದೇಶದಂತೆ ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಚೆಲುವರಾಜು‌, ಉಪನಿರೀಕ್ಷಕರಾದ ಶ್ರೀ ಅವಿನಾಶ್, ಏ.ಎಸ್.ಐ ಶ್ರೀ ಗಿರೀಶ್ ಮತ್ತು ಬಂಟ್ವಾಳ ಡಿ.ವೈ.ಎಸ್.ಪಿ ವಿಶೇಷ ತಂಡದ ಸಿಬ್ಬಂದಿಯವರಾದ ಉದಯ ರೈ, ಪ್ರವೀಣ್ ಎಂ, ಪ್ರಶಾಂತ್, ಇರ್ಷಾದ್ ಪಿ, ಗೋಣಿಬಸಪ್ಪ, ಕುಮಾರ್ ಹೆಚ್.ಕೆ ಮತ್ತು ವಿವೇಕ್ ರವರು ಭಾಗವಹಿಸಿದ್ದರು.

ಈ ಪತ್ತೆ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ‌ ಬಹುಮಾನವನ್ನು ಘೋಷಿಸಿದ್ದಾರೆ.

- Advertisement -

Related news

error: Content is protected !!