Saturday, June 20, 2026
spot_imgspot_img
spot_imgspot_img

ಬಂಟ್ವಾಳ: ಫ್ಲೈವುಡ್ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ನಷ್ಟ..!

- Advertisement -
- Advertisement -

ಬಂಟ್ವಾಳ: ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಸುಮಾರು 2 ಲಕ್ಷ ರೂ. ನಷ್ಟ ಉಂಟಾದ ಘಟನೆ ಸಜೀಪ ಸಮೀಪದ ಕೋಟೆಕಣಿಯಲ್ಲಿ ನಡೆದಿದೆ.

ಬಂಟ್ವಾಳ ಹಾಗೂ ಪಾಂಡೇಶ್ವರ ಅಗ್ನಿಶಾಮಕ ವಾಹನಗಳು ತೆರಳಿ ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.

ಶಬೀರ್ ಅವರಿಗೆ ಸೇರಿದ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಮರದ ಅವಶೇಷ ರಾಶಿ ಹಾಕಿದ್ದ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕಾರ್ಯಾಚರಣೆಯಲ್ಲಿ ಪಾಂಡೇಶ್ವರ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜ, ಬಂಟ್ವಾಳ ಅಗ್ನಿಶಾಮಕ ಠಾಣೆಯ ಸಿಬಂದಿ ಚಂದ್ರಕಾಂತ, ಪುರುಷೋತ್ತಮ, ರಾಜೇಶ್ ಶೆಟ್ಟಿ, ಕಿರಣ್ ಕುಮಾರ್, ರುಕ್ಕಯ್ಯ ಅಮೀನ್, ಕೆ.ಸುರೇಂದ್ರ, ನಾಗರಾಜ್, ಜಾಂಟಿ ಭಾಗವಹಿಸಿದ್ದರು.

- Advertisement -

Related news

error: Content is protected !!