- Advertisement -
- Advertisement -

ಬಂಟ್ವಾಳ: ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಮತ್ತೋರ್ವ ಮಹಿಳೆ ಮೃತಪಟ್ಟ ಘಟನೆ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪುಮನೆಯಲ್ಲಿ ನಡೆದಿದೆ.

ಮಣ್ಣಿನೊಳಗಿದ್ದ ಮಹಿಳೆಯನ್ನು ರಕ್ಷಣೆ ಮಾಡಲು ಮಾಡಿದ ಸತತ ಪ್ರಯತ್ನ ವಿಫಲವಾಗಿದೆ. ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(47) ಹಾಗೂ ಶಫಾ(20) ಮನೆಯಡಿಯಲ್ಲಿ ಸಿಲುಕಿ ಹಾಕಿಕೊಂಡವರು. ಅವರಲ್ಲಿ ಶಫಾ ಅವರನ್ನು ತಕ್ಷಣ ರಕ್ಷಣೆ ಮಾಡಲಾಗಿದೆ. ಝರಿನಾ ಅವರು ಮೃತಪಟ್ಟಿದ್ದಾರೆ. ಕೆಲವು ಗಂಟೆಗಳ ಕಾಲ ರಕ್ಷಣಾ ಕಾರ್ಯ ದಲ್ಲಿ ಸ್ಥಳೀಯರು ತೊಡಗಿದ್ದರು. ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು, ತಾಲೂಕು ಆಡಳಿತದ ಸಿಬಂದಿ ಸ್ಥಳದಲ್ಲಿ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಸ್ಥಳದಲ್ಲಿದ್ದಾರೆ.
ತಾಲೂಕಿನಲ್ಲಿ ಅನೇಕ ಕಡೆಗಳಲ್ಲಿ ಮನೆ ಕುಸಿಯುವ ಮತ್ತು ಗುಡ್ಡ ಕುಸಿದು ಮನೆಗೆ ಹಾನಿಯಾಗುವ ಸಂಭವವು ಹೆಚ್ಚಿದ್ದು ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳಲಿ.
- Advertisement -