Saturday, April 27, 2024
spot_imgspot_img
spot_imgspot_img

ಕರಾವಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ಮುಖ್ಯಮಂತ್ರಿಗೆ ಜಿಲ್ಲೆಯ ಶಾಸಕರಿಂದ ಮನವಿ

- Advertisement -G L Acharya panikkar
- Advertisement -

ಬಂಟ್ವಾಳ: ಕರಾವಳಿಗೆ ಪ್ರತ್ಯೇಕ ಮರಳು ನೀತಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಕರಾವಳಿ ಶಾಸಕರ ತಂಡ ಮುಖ್ಯಮಂತ್ರಿಯವರಿಗೆ ಮನವಿ ನೀಡಿದರು.

ಕರಾವಳಿಯ ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಬೇಕು ಹಾಗೂ ಮರಳು ಗಣಿಗಾರಿಕೆ ನಿಯಮಗಳಿಗೆ ತಿದ್ದುಪಡಿ ತರಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಕರಾವಳಿಯ ಮೂರು ಜಿಲ್ಲೆಗಳ ನದಿಗಳಲ್ಲಿ ಮುಳುಗಿ ಮರಳು ತೆಗೆಯುವ ಕ್ರಮ ಬಹಳ ಹಿಂದಿನಿಂದಲೂ ಇದೆ. ಅದನ್ನು ಮುಂದುವರಿಸಬೇಕು.ಕರಾವಳಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯುತ್ತಿದ್ದು ಇತರ ಜಿಲ್ಲೆಗಳ ನಿಯಮಗಳು ಇಲ್ಲಿಗೆ ಅನ್ವಯಿಸುವುದಿಲ್ಲ.ಅದಕ್ಕಾಗಿ ನದಿಯಲ್ಲಿ ಮರಳು ಗಣಿಗಾರಿಕೆ ನಿಷೇಧವನ್ನು ತೆಗೆಯಬೇಕು. ಇದು ಕೇವಲ ಕರಾವಳಿಗೆ ಜಿಲ್ಲೆಗಳಿಗೆ ಮಾತ್ರ ಅನ್ವಯ ಆಗಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದ್ದಾರೆ.

ಮಳೆಹಾನಿ ಪರಿಹಾರ ಬಿಡುಗಡೆ ಮಾಡಲು ಕೂಡ ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದೇವೆ.
ದ.ಕ ಜಿಲ್ಲೆಯಲ್ಲಿ ಭಾರೀ ವರ್ಷಧಾರೆಯಿಂದ ಅಪಾರ ಹಾನಿಯಾಗಿದ್ದು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ವಿತರಣೆಗೆ ಸರಕಾರ ಪರಿಹಾರ ಧನ ಬಿಡುಗಡೆ ಮಾಡಬೇಕು ಎಂದು ಈ ಮನವಿ ಮಾಡಿದ್ದೇವೆ.ಎಂದುಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಹಿರಿಯ ಶಾಸಕರಾದ ಅಂಗಾರ, ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಸಂಜೀವ ಮಠಂದೂರು, ಭರತ್ ಶೆಟ್ಟಿ ಉಪಸ್ಥಿತರಿದ್ದರು.

- Advertisement -

Related news

error: Content is protected !!