Tuesday, June 9, 2026
spot_imgspot_img
spot_imgspot_img

ಬಂಟ್ವಾಳ: ರಿಕ್ಷಾ-ಕಾರು ಡಿಕ್ಕಿ; ರಿಕ್ಷಾ ಚಾಲಕ ಮೃತ್ಯು

- Advertisement -
- Advertisement -
vtv vitla

ಬಂಟ್ವಾಳ: ರಿಕ್ಷಾಕ್ಕೆ ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ ಕೆಂಪು ಗುಡ್ಡೆ ನಿವಾಸಿ ವಿನಾಯಕ ಪೈ ಮೃತಪಟ್ಟ ದುರ್ದೈವಿ.

ವಿನಾಯಕ ಪೈ ಅವರು ಮನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಬೆಳಿಗ್ಗೆ ಹೊತ್ತಿನ ಉಪಹಾರ ತರಲೆಂದು ವಗ್ಗದ ಹೊಟೇಲ್‌ವೊಂದಕ್ಕೆ ಹೋಗುವ ವೇಳೆ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾಗಿದೆ.

ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆ ಸಾಗಿಸುವ ದಾರಿ ಮಧ್ಯದಲ್ಲಿ ಅವರು ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು,ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!