- Advertisement -
- Advertisement -
ವಿಠಲ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಪ್ರಥಮ ಸ್ಥಾನ






ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಈ ಪಂದ್ಯಾಟದಲ್ಲಿ ವಿಠಲ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಪ್ರಥಮ ಸ್ಥಾನ (ಶಾಜಿನ, ಸುಶ್ಮಿತಾ, ಪೂರ್ವಿ, ಸ್ವಾತಿ, ದೀಪ, ಅಶ್ವಿತಾ, ಕೃತಿಕಾ, ಫರ್ಹನ, ಫರ್ಝನ, ಪವಿತ್ರ, ಶರಣ್ಯ, ಜಯಶ್ರೀ ) ಪಡೆದಿದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ ಹಾಗೂ ವಿಠ್ಠಲ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀನಿವಾಸ ಗೌಡ ತರಬೇತಿ ನೀಡಿರುತ್ತಾರೆ.
ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ ದೀಪಕ್ ಸುರುಳಿಮೂಳೆ, ಸುಬ್ರಮಣ್ಯ ವಿಟ್ಲ ಸಹಕರಿಸಿದ್ದಾರೆ. ತಂಡದ ವ್ಯವಸ್ಥಾಪಕರಾಗಿ ಜಲಜಾಕ್ಷಿ , ಮಾಧವ ವಿ ಎಸ್, ಲೋಕಾನಂದ ಸಹಕರಿಸಿದ್ದಾರೆ. ಇವರಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.
- Advertisement -