Saturday, April 20, 2024
spot_imgspot_img
spot_imgspot_img

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಸನ್ನದ್ದರಾಗಬೇಕು – ಟಿ.ಡಿ.ನಾಗರಾಜ್

- Advertisement -G L Acharya panikkar
- Advertisement -

ಬಂಟ್ವಾಳ : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಸನ್ನದ್ದರಾಗಬೇಕು ಎಂದು ಮುಖ್ಯಮಂತ್ರಿಯ ಚಿನ್ನದಪದಕ ಪುರಸ್ಕ್ರತ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಕರೆ ನೀಡಿದರು.

ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಮಾರ್ನಬೈಲ್ ನ ಮೆಲ್ಕಾರ್ ಮಹಿಳಾ ಕಾಲೇಜಿ ನಲ್ಲಿ ನಡೆದ ವಿದ್ಯಾರ್ಥಿ ವೇತನ ವಿತರಣೆ, ಸನ್ಮಾನ ಸಮಾರಂಭ ಹಾಗೂ ತರಬೇತಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಇಲಾಖೆ ಅಥವಾ ಅಧಿಕಾರಿಗಳು ಯಾವುದೇ ಸಾಧನೆ ಮಾಡಬೇಕಾದರೆ ಸಾರ್ವಜನಿಕರ ಸಹಕಾರ ಅತೀ ಅಗತ್ಯ, 99 ಶೇಕಡಾ ಉತ್ತಮ ಜನತೆಯನ್ನು ಹೊಂದಿದ ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸುವುದು ನನಗೆ ಹೆಮ್ಮೆಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಬಂಟ್ವಾಳ ಘಟಕಾಧ್ಯಕ್ಷ ಹಾಜಿ ಎ.ಉಸ್ಮಾನ್ ಕರೋಪಾಡಿ, ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಜೀವನ ಮೌಲ್ಯಗಳನ್ನು ರೂಢಿಸಿಕೊಂಡು ದೇಶದ ಸತ್ಪ್ರಜೆಗಳಾಗಬೇಕು ಎಂದರು. ವಗ್ಗ ಸರಕಾರಿ ಪ.ಪೂ.ಕಾಲೇಜು ಪ್ರಭಾರ ಪ್ರಾಂಶುಪಾಲ ಶಮೀವುಲ್ಲಾ, ಮೆಲ್ಕಾರ್ ಮಹಿಳಾ ಕಾಲೇಜು ಪ್ರಾಂಶುಪಾಲ ಬಿ.ಕೆ.ಅಬ್ದುಲ್ ಲತೀಪ್, ಸಂಸ್ಥೆಯ ಅವಿಭಜಿತ ದ.ಕ.ಜಿಲ್ಲೆ ಮತ್ತು ಬಂಟ್ವಾಳ ತಾಲೂಕು ಘಟಕದ ಕೋಶಾಧಿಕಾರಿ ಎಫ್.ಎಂ.ಬಶೀರ್ ಫರಂಗಿಪೇಟೆ, ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಅತಿಥಿಗಳಾಗಿ ಭಾಗವಹಿಸಿದ್ದರು.

ಇದೇ ವೇಳೆ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ , ಕೋವಿಡ್ ಸೇನಾನಿ ಡಾ. ಎಂ.ಎಂ. ಶರೀಫ್ ಆಲಡ್ಕ ಇವರನ್ನು ಸನ್ಮಾನಿಸಲಾಯಿತು ತಾಲೂಕಿನ 30 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಜಮೀಯ್ಯತುಲ್ ಫಲಾಹ್ ಜಿಲ್ಲಾ ಸಮಿತಿ ಮಾಜಿ ಅಧ್ಯಕ್ಷ ಹಾಜಿ.ಜಿ.ಮುಹಮ್ಮದ್ ಹನೀಫ್ ಗೋಳ್ತಮಜಲು, ಘಟಕದ ಪೂರ್ವಾಧ್ಯಕ್ಷರುಗಳಾದ ಬಿ.ಎ. ಮುಹಮ್ಮದ್ ಬಂಟ್ವಾಳ, ಮುಹಮ್ಮದ್ ರಫೀಕ್ ಹಾಜಿ ಆಲಡ್ಕ, ನೋಟರಿ ಅಬೂಬಕ್ಕರ್ ವಿಟ್ಲ, ಸುಲೈಮಾನ್ ಸೂರಿಕುಮೇರು, ಪಿ.ಮಹಮ್ಮದ್ ಪಾಣೆಮಂಗಳೂರು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಲತೀಫ್ ನೇರಳಕಟ್ಟೆ ಮುಹಮ್ಮದ್ ನಾರಂಕೋಡಿ, ಕೆ.ಎಸ್.ಮುಹಮ್ಮದ್ ಕಡೇಶ್ವಾಲ್ಯ, ಅಬ್ದುರ್ರಹ್ಮಾನ್ ಹಾಜಿ ಕೇಪು, ಸಯ್ಯದ್ ಇರಾ ಅಜೀವ ಸದಸ್ಯ ಟಿ.ಕೆ. ಮೊಹಮ್ಮದ್ ಟೋಪ್ಕೋ ವಿಟ್ಲ, ಉಪನ್ಯಾಸಕ ಮಜೀದ್ ಕಡೆಗೋಳಿ, ರಶೀದ್ ಉಕ್ಕುಡ ಮೊದಲಾದವರು ಉಪಸ್ಥಿತರಿದ್ದರು.

ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎಚ್. ಇಕ್ಬಾಲ್ ಸ್ವಾಗತಿಸಿ ಪೂರ್ವಾಧ್ಯಕ್ಷ ಆಸಿಫ್ ಇಕ್ಬಾಲ್ ವಂದಿಸಿದರು. ಜೊತೆ ಕಾರ್ಯದರ್ಶಿ ಅಬ್ದುಲ್ ರಝಾಕ್ ಅನಂತಾಡಿ ಪ್ರಸ್ತಾವನೆಗೈದರು, ರಶೀದ್ ವಿಟ್ಲ ಸನ್ಮಾನಿತರನ್ನು ಪರಿಚಯಿಸಿದರು. ಬಿ.ಎಂ.ತುಂಬೆ ತರಬೇತಿ ನಡೆಸಿಕೊಟ್ಟು ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!