Sunday, June 14, 2026
spot_imgspot_img
spot_imgspot_img

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಬಸ್‌ ..!

- Advertisement -
- Advertisement -

ಬಂಟ್ವಾಳ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಘಟನೆ ರಾ.ಹೆ.75ರ ತುಂಬೆ ರಾಮಲಕಟ್ಟೆ ಬಳಿ ನಡೆದಿದೆ. ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ.

ಬಸ್ ಬಿ.ಸಿ.ರೋಡು ಭಾಗದಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದು, ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಬಸ್ ತೆರವು ಮಾಡಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!