Friday, June 5, 2026
spot_imgspot_img
spot_imgspot_img

ಬಂಟ್ವಾಳ: ಚಾಲಕನಿಗೆ ಮೂರ್ಚೆ ರೋಗ ಉಂಟಾಗಿ ಶಾಲಾ ಬಸ್‌‌ ವಿದ್ಯುತ್ ಕಂಬಕ್ಕೆ ಡಿಕ್ಕಿ; ಅಪಾಯದಿಂದ ಪಾರು..!

- Advertisement -
- Advertisement -

ಬಂಟ್ವಾಳ: ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ವೇಳೆ ಚಾಲಕನಿಗೆ ಮೂರ್ಚೆ ರೋಗ (ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ನಡೆದಿದೆ.

ಮೂರ್ಚೆ ರೋಗ ಉಂಟಾದ ಚಾಲಕ ಬಡಕಬೈಲಿನ ಆಂಗ್ಲ ಮಾಧ್ಯಮ ಶಾಲೆಯೊಂದರ ಬಸ್ ಚಾಲಕ ಅಡ್ಡೂರು ನಿವಾಸಿ ಸುರೇಶ್ ಎಂದು ಗುರುತಿಸಲಾಗಿದೆ.

ಚಾಲಕನಿಗೆ ಮೂರ್ಚೆ ರೋಗ ಉಂಟಾದ ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ತೆರಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾವುದೇ ಅಪಾಯವಿಲ್ಲದೆ ಚಾಲಕ ಸಹಿತ ವಿದ್ಯಾರ್ಥಿಗಳು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!