Sunday, June 29, 2025
spot_imgspot_img
spot_imgspot_img

ಬಂಟ್ವಾಳ: ಬಸ್‌ನಿಂದ ಹೊರಕ್ಕೆಸೆಯಲ್ಪಟ್ಟ ವಿಧ್ಯಾರ್ಥಿನಿ ಗಂಭೀರ ಗಾಯ..!

- Advertisement -
- Advertisement -

ಬಂಟ್ವಾಳ: ಖಾಸಗಿ ಬಸ್ ನಿಂದ ಹೊರಗೆ ಎಸೆಯಲ್ಪಟ್ಟ ವಿಧ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ.

ಗಾಯಗೊಂಡವರನ್ನು ಪಾಣೆಮಂಗಳೂರು ಗ್ರಾಮದ ಗುಡ್ಡೆಯಂಗಡಿ ನಿವಾಸಿ ಮುಹಮ್ಮದ್ ರಫೀಕ್ ಎಂಬವರ ಮಗಳು ಅಪ್ಸನಾ ಎಂದು ಗುರುತಿಸಲಾಗಿದೆ.

ಬೆಳಗ್ಗೆ ಅಪ್ಸನಾ ಹೋಗುತ್ತಿದ್ದ ಬಸ್‌ ಚಾಲಕ ಒಮ್ಮೇಲೆ ಬ್ರೇಕ್ ಹಾಕಿದ ಪರಿಣಾಮ ಬಸ್ ನಿಂದ ಇಳಿಯಲು ಡೋರ್ ಬಳಿ ನಿಂತಿದ್ದ ವಿದ್ಯಾರ್ಥಿನಿ ಬಸ್‌ನಿಂದ ಒಮ್ಮೆಲೆ ಹೊರೆಗೆ ಎಸೆಯಲ್ಪಟ್ಟರು ಎನ್ನಲಾಗಿದೆ. ರಸ್ತೆಗೆ ಬಿದ್ದು ಆಕೆಯ ತಲೆಗೆ ಗಂಭೀರ ಗಾಯವಾಗಿದೆ. ಮಂಗಳೂರು ನಗರದ ಖಾಸಗಿ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!