Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಅಡಿಕೆ ಮರದಿಂದ ಕಾಲು ಜಾರಿ ಬಿದ್ದು ಕಾರ್ಮಿಕ ಮೃತ್ಯು..!

- Advertisement -
- Advertisement -

ಬಂಟ್ವಾಳ: ಅಡಿಕೆ ಮರದಿಂದ ಅಡಿಕೆ ಕೀಳುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ನಡೆದಿದೆ.

ಮೃತಪಟ್ಟ ಕಾರ್ಮಿಕನನ್ನು ಬೋಳಂಗಡಿ ಮಜಲ್ ಮನೆ ನಿವಾಸಿ ಜೋನ್ ಲೋಬೊ(45) ಎಂದು ಗುರುತಿಸಲಾಗಿದೆ.

ಜೋನ್ ಲೋಬೊ ಅವರು ಬೋಳಂಗಡಿ ಪದ್ಮನಾಭ ಪ್ರಭು ಎಂಬವರ ತೋಟದಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಡಿಕೆ ಮರದಿಂದ ಬಿದ್ದಿದ್ದಾರೆ. ತಕ್ಷಣ ಅವರನ್ನು ‌ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದ್ರೂ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಪತ್ನಿ ಸ್ವಪ್ನ ವಿ.ಎಂ. ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!