Monday, June 15, 2026
spot_imgspot_img
spot_imgspot_img

ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

- Advertisement -
- Advertisement -
vtv vitla

ಬಂಟ್ವಾಳ: ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ಗೂಡಿನಬಳಿಯಲ್ಲಿ ನಡೆದಿದೆ.

ಮೃತನನ್ನು ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಚೆರಿಯೆಮೋನು ಎಂಬವರ ಪುತ್ರ ಜಾಫರ್ (24) ಎಂದು ತಿಳಿದುಬಂದಿದೆ. ಕೂಲಿ ಕೆಲಸ ಮಾಡುತ್ತಿದ್ದ ಈತ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಮಾಡಿಕೊಂಡಿದ್ದಾರೆ. ಮೃತರು ತಂದೆ, ತಾಯಿ, 6 ಮಂದಿ ಸಹೋದರರು, ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.

ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!