Monday, June 15, 2026
spot_imgspot_img
spot_imgspot_img

ಹಳೆ ವೈಷಮ್ಯ ; ನಡುರಸ್ತೆಯಲ್ಲೇ ಗ್ರಾ.ಪಂ ಅಧ್ಯಕ್ಷನನ್ನು ಅಟ್ಟಾಡಿಸಿ ಬರ್ಬರ ಹತ್ಯೆ

- Advertisement -
- Advertisement -

ಹಾಡಹಗಲೇ ಜನ ಓಡಾಡುವ ಪ್ರದೇಶದಲ್ಲೇ ಗ್ರಾಮ ಪಂಚಾಯತ್‌ ಅಧ್ಯಕ್ಷನನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋಗಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿಯಲ್ಲಿ ಜಿಲ್ಲೆಯ ಚೌಡಾಪೂರದಲ್ಲಿ ನಡೆದಿದೆ. ಮದರಾ(ಬಿ) ಗ್ರಾಮ ಪಂಚಾಯತ್ ಅಧ್ಯಕ್ಷ ಗೌಡಪ್ಪಗೌಡ ಪಾಟೀಲ್ ಕೊಲೆಯಾದವರು.

ಅಫಜಲಪುರ ತಾಲೂಕಿನ ಚೌಡಾಪುರ ಬಸ್ ನಿಲ್ದಾಣದ ಬಳಿ ಗೌಡಪ್ಪಗೌಡ ಪಾಟೀಲ್‌ ನಿಂತಿದ್ದರು. ಈ ವೇಳೆ ಬಂದ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಇವರಿಂದ ತಪ್ಪಿಸಿಕೊಂಡು ಓಡಲು ಯತ್ನಿಸಿದ್ದಾರೆ. ಆದರೂ ಬಿಡದೇ ಬೆನ್ನಹತ್ತಿ ಕೊಚ್ಚಿ ಕೊಲೆಗೈದಿದ್ದಾರೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಗಾಣಗಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದು, ಹತ್ಯೆ ಮಾಡಿದ ಹಂತಕರ ಹುಡುಕಾಟ ನಡೆಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿರುವ ಸಿಸಿ ಟಿವಿಯನ್ನು ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!