Sunday, June 29, 2025
spot_imgspot_img
spot_imgspot_img

ಅಮಾವಾಸ್ಯೆಯಂದು ದೇವಸ್ಥಾನದಲ್ಲಿ ಪತ್ನಿಯ ಎದುರೇ ಪತಿಯ ಬರ್ಬರ ಹತ್ಯೆ..!!

- Advertisement -
- Advertisement -

ಅಮಾವಾಸ್ಯೆ ಹಿನ್ನಲೆ ಪತ್ನಿ ಜೊತೆ ದೇವಸ್ಥಾನಕ್ಕೆ ಬಂದಿದ್ದ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಮೂಡಲಗಿ ತಾಲೂಕಿನ ಬನಸಿದ್ದೇಶ್ವರ ದೇವಸ್ಥಾನದಲ್ಲಿ ನಡೆದಿದೆ.

ಘಟನೆಯಲ್ಲಿ ಶಂಕರ್ ಸಿದ್ದಪ್ಪ ಜಗಮುತ್ತಿ(25) ಮೃತಪಟ್ಟ ಯುವಕ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಟ್ಟಿ ಬನಸಿದ್ದೇಶ್ವರ ದೇವಸ್ಥಾನದ ಮುಂದೆ ಹೆಂಡತಿಯ ಕಣ್ಣೆದುರೇ ಗಂಡನ ಮೇಲೆ ಮಚ್ಚು ಲಾಂಗುಗಳಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.

ಮೃತ ಶಂಕರ್ ಕಳೆದ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಅಮಾವಾಸ್ಯೆ ಹಿನ್ನೆಲೆ ಇಂದು ಪತ್ನಿ ಪ್ರಿಯಾಂಕಾ ಜೊತೆಗೆ ದೇವಸ್ಥಾನಕ್ಕೆಂದು ಬಂದಿದ್ದರು. ವಡೇರಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನಕ್ಕೆ ಬಂದ ವೇಳೆ ಘಟನೆ ನಡೆದಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!