Monday, May 20, 2024
spot_imgspot_img
spot_imgspot_img

ಗದಗದಲ್ಲಿ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ :ಮಗನಿಂದಲೇ ಸುಪಾರಿ

- Advertisement -G L Acharya panikkar
- Advertisement -

ಏ.19 ರಂದು ನಡೆದಿದ್ದ ಗದಗದಲ್ಲಿ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಕುಟುಂಬವನ್ನು ಮುಗಿಸಲು ಕುಟುಂಬದ ಪ್ರಕಾಶ್ ಬಾಕಳೆ ಮಗನೇ ಸುಪಾರಿ ಕೊಟ್ಟಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಐಜಿಪಿ ವಿಕಾಸಕುಮಾರ್ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಅವರ ಮಗ ವಿನಾಯಕ, ಕುಟುಂಬದವರನ್ನು ಮುಗಿಸಲು ಹಂತಕರಿಗೆ 65 ಲಕ್ಷ ರೂ. ಹಣ ಕೊಡುವುದಾಗಿ ಮಾತಾಡಿದ್ದ. ಅಲ್ಲದೇ ಮುಂಗಡವಾಗಿ 2 ಲಕ್ಷ ರೂ. ಕೊಟ್ಟಿದ್ದ ಎಂದು ತಿಳಿಸಿದ್ದಾರೆ.

ಬಿಜೆಪಿ ನಾಯಕಿ, ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆಯವರ ಮನೆಗೆ ನುಗ್ಗಿದ್ದ ಹಂತಕರು ಕಾರ್ತಿಕ್ ಬಾಕಳೆ (28), ಪರಶುರಾಮ್ ಹಾದಿಮನಿ (55), ಲಕ್ಷ್ಮೀ ಹಾದಿಮನಿ (45) ಆಕಾಂಕ್ಷಾ (16) ಹತ್ಯೆಮಾಡಿದ್ದರು. ಕೊಲೆಯಾದ ದಿನ ಸ್ಥಳದಲ್ಲಿಯೇ ಆರೋಪಿ ವಿನಾಯಕ ಇದ್ದುದಲ್ಲದೇ ಆತನೇ ಪೊಲೀಸರಿಗೆ ಖುದ್ದಾಗಿ ಮಾಹಿತಿ ಕೊಟ್ಟದ್ದ. ಈ ವೇಳೆ ತನಗೆ ಏನು ಗೊತ್ತಿಲ್ಲದಂತೆ ವರ್ತಿಸಿದ್ದ.

ಆರೋಪಿ ವಿನಾಯಕ ಪ್ರಕಾಶ್ ಬಾಕಳೆ ಮೊದಲ ಹೆಂಡತಿ ಮಗನಾಗಿದ್ದು, ಆಸ್ತಿ ವಿಚಾರದ ವೈಷಮ್ಯದಿಂದ ಮಹಾರಾಷ್ಟ್ರ ಮೂಲದ ಫಯಾಜ್ ಗ್ಯಾಂಗ್‍ಗೆ ಸುಪಾರಿ ಕೊಟ್ಟಿದ್ದ ಎಂದು ತಿಳಿದು ಬಂದಿದೆ.

ಆರೊಪಿಗಳಾದ ವಿನಾಯಕ ಫೈರೋಜ್ ಖಾಜಿ, ಜಿಶಾನ್ ಖಾಜಿ, ಸಾಹಿಲ್ ಖಾಜಿ, ಸೊಹೇಲ್ ಖಾಲಿ, ಸುಲ್ತಾನ್ ಶೇಖ್, ಮಹೇಶ್ ಸಾಳೊಂಕೆ, ವಾಹಿದ್ ಬೇಪಾರಿ ಎಂಬವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!