Friday, July 11, 2025
spot_imgspot_img
spot_imgspot_img

ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ: ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಹತ್ಯೆಗೈದು 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್​ನಲ್ಲಿಟ್ಟ ಆರೋಪಿ

- Advertisement -
- Advertisement -

ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ 30 ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕನಗರದಲ್ಲಿ ನಡೆದಿದೆ.

ಮಹಾಲಕ್ಷ್ಮಿ (29) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ.

ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಹತ್ಯೆ ಮಾಡಲಾಗಿದೆ. 2-3 ತಿಂಗಳಿನಿಂದ ಮಹಿಳೆ ಮನೆಯಲ್ಲಿ ಬಾಡಿಗೆಗಿದ್ದರು. ಇಂದು ಸಂಬಂಧಿಕರು ಬೀಗ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಾಲಕ್ಷ್ಮಿ ಬೇರೆ ರಾಜ್ಯದವರಾಗಿದ್ದು, ಕರ್ನಾಟಕದಲ್ಲಿ ನೆಲೆಸಿದ್ದರು. ಗಂಡನಿಂದ ದೂರವಾಗಿದ್ದ ಮಹಾಲಕ್ಷ್ಮಿ ಒಬ್ಬಳೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು ಎಂದು ತಿಳಿದುಬಂದಿದೆ.
ಆದರೆ ಪಿಕಪ್‌ ಡ್ರಾಪ್‌ ಎಂದು ಒಬ್ಬ ಯುವಕ ಆಕೆಯನ್ನು ಕರೆದೊಯ್ಯುತ್ತಿದ್ದ. ಹೀಗಾಗಿ ಆತನೇ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆಗಾಗಿ ತನಿಖೆ ಮುಂದುವರೆದಿದೆ.

ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

- Advertisement -

Related news

error: Content is protected !!