Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನ ನಡುವೆ ಜಗಳ; ಚಾಕು ಇರಿದು ಮಗನ ಬರ್ಬರ ಹತ್ಯೆ…!!

- Advertisement -
- Advertisement -

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾದ ಘಟನೆ ಉಜಿರೆ ಗ್ರಾಮದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರಿ ಎಂಬವರು ಅ.29ರಂದು ಎಂದಿನಂತೆ ಮಲಗಿರುವ ವೇಳೆ ಅವರ ಮಗ ಜಗದೀಶ್ ಆಚಾರಿ ಅವರು ತಂದೆಯೊಂದಿಗೆ ಯಾವುದೋ ಕಾರಣಕ್ಕೆ ಮಾತು ಆರಂಭಿಸಿದ್ದು, ಇದು ಮಾತಿಗೆ ಮಾತು ಬೆಳೆದು ಕೋಪಗೊಂಡ ತಂದೆ ಮಗನ ಕುತ್ತಿಗೆಗೆ ಚೂರಿಯಿಂದ ಇರಿದಿದ್ದಾರೆ.

ಈ ವೇಳೆ ಗಂಭೀರವಾಗಿ ಗಾಯಗೊಂಡ ಜಗದೀಶ್ ಅವರನ್ನು ಮನೆಯವರು ಸೇರಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಜಗದೀಶ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜಗದೀಶ್ ಮೃತದೇಹದ ಪರೀಕ್ಷೆ ನಡೆಸಲಾಗುವುದು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!