Monday, June 8, 2026
spot_imgspot_img
spot_imgspot_img

ಮಂಗಳೂರು: ಕಾಂಪೌಂಡ್ ತಡೆಗೋಡೆ ಕುಸಿತ: ಸ್ಥಳದಲ್ಲಿಯೇ ಕಾರ್ಮಿಕ ಸಾವು

- Advertisement -
- Advertisement -

ಮಂಗಳೂರು: ತಡೆಗೋಡೆ ಕುಸಿತದಿಂದ ಮಣ್ಣಿನಡಿ ಸಿಲುಕಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಗರದ ಕೂಳೂರಿನಲ್ಲಿ ನಡೆದಿದೆ.

ಮಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾಂಪೌಂಡ್ ಗೋಡೆ ಕುಸಿದು ವ್ಯಕ್ತಿಯೋರ್ವರು ಮಣ್ಣಿನಡಿಯಲ್ಲೇ ಜೀವಂತ ಸಮಾಧಿಯಾದ ಘಟನೆ ನಡೆದಿದೆ.ಮಂಗಳೂರಿನ ಬಂಗ್ರಕೂಳೂರು ಬಳಿ ಮನೆಯೊಂದರ ಕೂಲಿ ಕೆಲಸ ಮಾಡುತ್ತಿದ್ದ ನೀರುಮಾರ್ಗ ನಿವಾಸಿ 38 ವರ್ಷದ ಉಮೇಶ್ ಮೃತಪಟ್ಟ ದುರ್ದೈವಿ.ಮನೆಯೊಂದರ ತೋಟದ ಕೆಲಸ ಮಾಡುತ್ತಿದ್ದ ವೇಳೆ ಪಕ್ಕದ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ.

ಈ ವೇಳೆ ಅಲ್ಲೇ ಇದ್ದ ಮೂವರು ಕಾರ್ಮಿಕರು ಓಡಿ ಪಾರಾಗಲು ಯತ್ನಿಸಿದ್ದರು.ಇಬ್ಬರು ಓಡಿ ಪಾರಾಗಿದ್ದು ಉಮೇಶ್ ಅವರು ಅಲ್ಲೇ ತೆಗೆದಿದ್ದ ಶೌಚಾಲಯ ಗುಂಡಿಗೆ ಬಿದ್ದಿದ್ದು ಅವರ ಮೇಲೆ ಕುಸಿದ ಮಣ್ಣು ಬಿದ್ದಿದೆ.ಸುಮಾರು ಮೂರು ಗಂಟೆಯ ಕಾರ್ಯಾಚರಣೆ ಬಳಿಕ ಉಮೇಶ್ ಅವರ ಮೃತದೇಹ ಮೇಲಕ್ಕೆತ್ತಲಾಗಿದೆ.ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!