Sunday, June 7, 2026
spot_imgspot_img
spot_imgspot_img

ಶುಭ್‌ಮನ್ ಗಿಲ್‌ಗೆ 12 ಲಕ್ಷ ರೂ. ದಂಡ ರೂ. ವಿಧಿಸಿದ ಬಿಸಿಸಿಐ

- Advertisement -
- Advertisement -

ಮುಂಬೈ: ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್‌ಮನ್ ಗಿಲ್‌ಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.

ಐಪಿಎಲ್‌ನ 35ನೇ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಶುಭ್‌ಮನ್ ಗಿಲ್‌ಗೆ ಈ ದಂಡ ವಿಧಿಸಲಾಗಿದೆ. ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್‌ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್‌ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕನಿಗೆ ಬಿಸಿಸಿಐ ತಲಾ 12 ಲಕ್ಷ ರೂ. ದಂಡ ವಿಧಿಸುತ್ತದೆ.

ಅದರಂತೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್‌ಮನ್ ಗಿಲ್‌ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಮೂಲಕ ಶುಭ್‌ಮನ್ ಗಿಲ್ ಈ ಬಾರಿಯ ಐಪಿಎಲ್‌ನಲ್ಲಿ ದಂಡದ ಶಿಕ್ಷೆಗೆ ಗುರಿಯಾದ 7ನೇ ನಾಯಕರಾಗಿದ್ದಾರೆ.

ಈ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್‌ಗೆ, ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ, ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್‌ಗೆ, ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್‌ಗೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್‌ಗೆ ತಲಾ 12 ಲಕ್ಷ ದಂಡ ವಿಧಿಲಾಗಿದೆ. ಜೊತೆಗೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್‌ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

- Advertisement -

Related news

error: Content is protected !!