- Advertisement -
- Advertisement -






ಬೆಳಗಾವಿ: ಲಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಯಲ್ಲೇ ಎರಡೂ ಲಾರಿಗಳು ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಎಂ.ಕೆ ಹುಬ್ಬಳ್ಳಿ ಪಟ್ಟಣದ ಬಳಿ ನಡೆದಿದೆ.
ಪುಣೆ ಬೆಂಗಳೂರು ಹೆದ್ದಾರಿ ಮೇಲೆ ಸಾಗುತ್ತಿದ್ದ ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದೆ. ಗೋವಿನ ಜೋಳದ ಮೂಟೆ ಹೊತ್ತು ಸಾಗುತ್ತಿದ್ದ ಲಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಎರಡೂ ಲಾರಿಗಳಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಲಾರಿ ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ಬಳಿಕ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ ಮೇಲೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -








