Saturday, June 28, 2025
spot_imgspot_img
spot_imgspot_img

ಆಸ್ಪತ್ರೆ ಮುಂಭಾಗ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಯುವಕನ ಹತ್ಯೆ !!

- Advertisement -
- Advertisement -

ಬೆಳಗಾವಿ(ಅ.26): ನಿನ್ನೆ ತಡರಾತ್ರಿ ಬೆಳಗಾವಿ ಖಾಸಗಿ ಆಸ್ಪತ್ರೆ ಮುಂಭಾಗ ಯುವನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಯುವಕನನ್ನು ಬೆಳಗಾವಿ ಅಜಾಮ್ ನಗರ ನಿವಾಸಿ ಶೆಹಬಾಜ್ (24) ಎಂದು ಗುರುತಿಸಲಾಗಿದೆ.

ಹತ್ಯೆಗೆ ಹಳೇ ದ್ವೇಷವೇ ಕಾರಣ ಎಂದು ಹೇಳಲಾಗುತ್ತಿದೆ. ದುಷ್ಕರ್ಮಿಗಳ ಗುಂಪೊಂದು ಇದ್ದಕ್ಕಿದ್ದಂತೆ ದಾಳಿ ನಡೆಸಿ ಪರಾರಿಯಾಗಿದೆ. ಈ ಸಂದರ್ಭದಲ್ಲಿ ತೀವ್ರ ಗಾಯಗೊಂಡ ಶೆಹಬಾಜ್ ನನ್ನ ಬಿಮ್ಸ್ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿಯೇ ಮೃತಪಟ್ಟಿದ್ದಾನೆ. ಈತನ ಮೇಲೆ ಕೊಲೆ ಸೇರಿದಂತೆ ಹಲವು ಪ್ರಕರಣಗಳಿವೆ ಎನ್ನಲಾಗಿದೆ. ಶೆಹಬಾಜ್ ಸಾವಿನ ಸುದ್ದಿ ಹರಡುತ್ತಿದ್ದಂತೆಯೇ ಜಿಲ್ಲಾ ಆಸ್ಪತ್ರೆಯ ಬಳಿ ನೂರಾರು ಯುವಕರು ಸೇರಿದ್ದರು. ಪೊಲೀಸರು ಯುವಕರನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

- Advertisement -

Related news

error: Content is protected !!