- Advertisement -
- Advertisement -
ಬೆಳಗಾವಿ: ವಿಧವಾ ವೇತನ ಕೇಳಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆಗೈದಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಗ್ರೇಡ್ 2 ತಹಶೀಲ್ದಾರ್ ಡಿ.ಎಸ್.ಜಮಾದಾರಗೆ ಮಹಿಳೆಯರು ಚಪ್ಪಲಿಯಿಂದ ಥಳಿಸಿದ ಘಟನೆ ನಡೆದಿದೆ.

ವಿಧವಾ ವೇತನ ಪಡೆಯುವುದಕ್ಕೋಸ್ಕರ ಕಚೇರಿಗೆ ಆಗಮಿಸಿದ್ದ ಮಹಿಳೆಗೆ ಮರ್ಮಾಂಗ ತೋರಿಸಿ ಗ್ರೇಡ್ 2 ತಹಶೀಲ್ದಾರ್ ಡಿ.ಎಸ್.ಜಮಾದಾರ ವಿಕೃತಿ ಮೆರೆದಿದ್ದ ಎಂದು ಆರೋಪ ಕೇಳಿಬಂದಿತ್ತು. ಈ ಸುದ್ದಿ ಕಿವಿಗೆ ಬೀಳುತ್ತಿದ್ದಂತೆಯೇ ಆಕ್ರೋಶಗೊಂಡ ಸ್ಥಳೀಯ ಮಹಿಳೆಯರು ಗ್ರೇಡ್ 2 ತಹಶೀಲ್ದಾರ್ಗೆ ಕಚೇರಿಯಲ್ಲಿಯೇ ಥಳಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರಿಂದ ಜಮಾದಾರ್ ಗೆ ಚಪ್ಪಲಿ ಏಟು ನೀಡಿ ಆಕ್ರೋಶ ವ್ಯಕ್ತಡಿಸಿದ್ದಾರೆ. ಕಚೇರಿಯಿಂದ ಹೊರಗೆ ಎಳೆದುಕೊಂಡು ಬಂದು ಮಹಿಳೆಯರು ಗೂಸಾಕೊಟ್ಟಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಗ್ರೇಡ್ 2 ತಹಶೀಲ್ದಾರ್ ಡಿ.ಎಸ್.ಜಮಾದಾರರನ್ನು ರಕ್ಷಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


- Advertisement -








