Monday, July 1, 2024
spot_imgspot_img
spot_imgspot_img

ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶದಲ್ಲಿಂದು ಸಿಎಂ ಬಿಎಸ್​​ವೈ ವೈಮಾನಿಕ ಸಮೀಕ್ಷೆ , ಮಳೆ ಹಾನಿಗೆ ಸಂಬಂಧಿಸಿದಂತೆ ಚರ್ಚೆ.

- Advertisement -G L Acharya panikkar
- Advertisement -

ಬೆಳಗಾವಿ: ರಾಜ್ಯದ ನೆರೆಪೀಡಿತ ಪ್ರದೇಶಗಳ ವಾಸ್ತವಿಕ ಅಧ್ಯಯನ ನಡೆಸಿದ ನಂತರ ಕೇಂದ್ರ ಸರ್ಕಾರಕ್ಕೆ ಪರಿಹಾರ ಕೋರಿ ವರದಿ ಸಲ್ಲಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮಾನ್ಯ ಮುಖ್ಯಮಂತ್ರಿ ಗಳು ಇಂದು ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಮಾನ್ಯ ಸಚಿವರು ಮಾನ್ಯ ಸಂಸತ್ ಸದಸ್ಯರು ಮತ್ತು  ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ದೇವರ ಕೃಪೆಯಿಂದೆ ನಮ್ಮ ಎಲ್ಲಾ ಜಲಾಶಯಗಳು ತುಂಬಿ ತುಳುಕುತ್ತಿವೆ. ನಾವು ಇನ್ನಷ್ಟು ಅನಾಹುತ ಆಗುತ್ತದೆ ಎಂದು ನಿರೀಕ್ಷೆ ಮಾಡಿದ್ದೆವು. ಆದರೆ ಮಹಾರಾಷ್ಟ್ರದಲ್ಲಿ ಮಳೆ ಕಡಿಮೆಯಾಗಿ ಅದು ತಪ್ಪಿದೆ. ಐದಾರು ಜಿಲ್ಲೆಗಳಲ್ಲಿ ಸಮೀಕ್ಷೆ ಮಾಡುತ್ತೇನೆ. ಖುದ್ದು ಪರಿಶೀಲನೆ ಮಾಡಿ ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತೇನೆ. ಅಲ್ಲದೆ ವಾಸ್ತವಿಕ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗಳಾದ ಲಕ್ಷ್ಮಣ್ ಸವಧಿ, ಕಂದಾಯ ಸಚಿವರಾದ ಆರ್ ಅಶೋಕ್, ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ,ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಸೇರಿದಂತೆ ‌ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!