Monday, July 20, 2026
spot_imgspot_img
spot_imgspot_img

ಬೆಳಗಾವಿ: ಡಿಜಿಟಲ್‌ ಅರೆಸ್ಟ್‌: ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡ ವೃದ್ಧ ಉದ್ಯಮಿ

- Advertisement -
- Advertisement -

ಬೆಳಗಾವಿ: ವೃದ್ಧ ಉದ್ಯಮಿಯೊಬ್ಬರು ಸೈಬರ್‌ ವಂಚಕರ ಜಾಲಕ್ಕೆ ಸಿಲುಕಿ ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿನಡೆದಿದೆ. ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಹಣ ಕಳೆದುಕೊಂಡು ಉದ್ಯಮಿ ಕಂಗಾಲಾಗಿದ್ದಾರೆ.

ವೃದ್ಧ ಉದ್ಯಮಿಗೆ ವಿಡಿಯೋ ಕಾಲ್ ಮಾಡಿದ್ದ ಸೈಬರ್‌ ವಂಚಕರು, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಫ್ರಾಡ್‌ ಲಿಸ್ಟ್‌ನಲ್ಲಿ ತೋರಿಸುತ್ತಿದೆ. ನೀವು ಮನಿ ಲಾಡ್ರಿಂಗ್ ಮಾಡ್ತಿದ್ದೀರಿ ಎಂದು ಬೆದರಿಕೆ ಹಾಕಿದ್ದರು. ನಿಮ್ಮ ಹಣ ಬೇರೆ ಖಾತೆಗೆ ವರ್ಗಾಯಿಸಿ ಎಂದು ವಂಚಕರು ಅಕೌಂಟ್ ನಂಬರ್ ಕೊಟ್ಟಿದ್ದಾರೆ. ತನಿಖೆ ಮುಗಿದ ಬಳಿಕ ನಿಮ್ಮ ಹಣ ಮರಳಿಸುತ್ತೇವೆ ಎಂದು ನಂಬಿಸಿದ್ದಾರೆ. ಈ ರೀತಿ ವೃದ್ಧನಿಂದ ಹಂತ ಹಂತವಾಗಿ 15 ಕೋಟಿ ಹಣ ಹಾಕಿಸಿಕೊಂಡಿದ್ದಾರೆ. ಬಳಿಕ ಸಂಪರ್ಕಕ್ಕೆ ಸಿಗದೇ ಇದ್ದಾಗ ಸಂತ್ರಸ್ತನಿಗೆ ಅನುಮಾನ ಬಂದಿದೆ.

ಮಾ.18 ರಂದು ವೃದ್ಧ ಉದ್ಯಮಿ ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿದ್ದರು. ಬಳಿಕ ಬೆಳಗಾವಿ ನಗರ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ಸಿಇಎನ್ ಪೊಲೀಸರು ಸೈಬರ್ ವಂಚಕರ ಅಕೌಂಟ್ ಪ್ರೀಜ್ ಮಾಡಿದ್ದಾರೆ. ಈಗಾಗಲೇ 15 ಕೋಟಿ ಪೈಕಿ 90 ಲಕ್ಷ ಹಣ ಇದ್ದ ಖಾತೆ ಪ್ರೀಜ್ ಮಾಡಿದ್ದಾರೆ. ಸೈಬರ್ ವಂಚಕರ ಬಂಧನಕ್ಕೆ ಬೆಳಗಾವಿ ‌ಪೊಲೀಸ್ ಕಮಿಷನರ್‌ ವಿಶೇಷ ತಂಡ ರಚಿಸಿದ್ದಾರೆ. ಸೈಬರ್ ವಂಚಕರ ಈ ರೀತಿಯ ಬೆದರಿಕೆಗೆ ಹೆದರದೆ ದೂರು ನೀಡುವಂತೆ ಪೊಲೀಸರ ಮನವಿ ಮಾಡಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!