





ಬೆಳಗಾವಿ: ಗ್ರಾಮದ ಹೊರವಲಯದಲ್ಲಿರುವ ವಿಕ್ರಮ್ ಇನಾಮದಾರ್ ಗೆ ಸೇರಿದ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವ ಆರು ಜನರನ್ನು ಝೀರೋ ಟ್ರಾಫಿಕ್‌ನಲ್ಲಿಯೇ ಬೈಲಹೊಂಗಲದಿಂದ ಬೆಳಗಾವಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಎಸ್ಪಿ ಕೆ ರಾಮರಾಜನ್ ಪ್ರತಿಕ್ರಿಯಿಸಿದ್ದು, ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ಸಂಭವಿಸಿದೆ. 8 ಜನರಿಗೆ ಬಿಸಿ ಪದಾರ್ಥ (ಮಳ್ಳಿ) ಮೈ ಮೇಲೆ ಬಿದ್ದು ಗಾಯವಾಗಿದ್ದು, ಒಬ್ಬರನ್ನು ಬೈಲಹೊಂಗಲ ಆಸ್ಪತ್ರೆಗೆ ರವಾನಿಸಿದ್ದು, ಇನ್ನುಳಿದವರನ್ನು ಬೆಳಗಾವಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಝೀರೋ ಟ್ರಾಫಿಕ್‌ನಲ್ಲಿ ಗಾಯಾಳುಗಳನ್ನು ಶಿಫ್ಟ್ ಮಾಡಲಾಗಿದೆ. ದೂರು ಆಧರಿಸಿ ತನಿಖೆ ಮಾಡುತ್ತೇವೆ ಎಂದು ಹೇಳಿದರು.








