Friday, July 24, 2026
spot_imgspot_img
spot_imgspot_img

ಬೆಳಗಾವಿ:ಮೂವರು ಯುವಕರ ಮೇಲೆ ದುಷ್ಕರ್ಮಿಗಳಿಂದ ತಲ್ವಾರ್‌ ದಾಳಿ

- Advertisement -
- Advertisement -

ಬೆಳಗಾವಿ: ಇಲ್ಲಿನ ಅಮನ್ ನಗರದಲ್ಲಿ ಮೂವರು ಯುವಕರ ಮೇಲೆ ದುಷ್ಕರ್ಮಿಗಳು ತಲ್ವಾರ್‌ ದಾಳಿ ನಡೆಸಿದ್ದಾರೆ. ಹಳೇ ವೈಷಮ್ಯ ಹಿನ್ನೆಲೆ ಈ ದಾಳಿ ನಡೆದಿದೆ ಎನ್ನಲಾಗಿದೆ.

ದಾಳಿಗೊಳಗಾದವರನ್ನು ನಗರದ ವಲಿ ಶೇಖ್, ಇಮಾಮ್ ಶೇಖ್ ಮತ್ತು ಮಜೀದ್ ಶೇಖ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಗಾಯಾಳುಗಳ ಕುಟುಂಬಸ್ಥರು ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!