- Advertisement -
- Advertisement -




ಬೆಳಗಾವಿ: ಬಿಸಿಲಿನ ತಾಪ ತಾಳಲಾರದೆ ಬೆಳಗಾವಿ ಜಿಲ್ಲೆಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಲಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿವಾಸಿಯಾಗಿರುವ ವೆಂಕಟೇಶ್ ಬಳ್ಳಾರಿ(35) ಮೃತರು. ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಸೋಮವಾರ(ಏ.21) ಬಸವೇಶ್ವರ ಜಯಂತಿ ಸಂದರ್ಭದಲ್ಲಿ ಫೋಟೋ ಪೂಜೆ ಬಳಿಕ ಮೆರವಣಿಗೆ ಸಂದರ್ಭದಲ್ಲಿ ತಲೆ ತಿರುಗಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಈ ಕುರಿತು ಆಪ್ತರು ಮಾಹಿತಿ ನೀಡಿದ್ದು, ವೆಂಕಟೇಶ ಅವರು ಬಿಸಿಲಿನ ತಾಪ ತಾಳಲಾರದೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.
- Advertisement -








