Tuesday, June 30, 2026
spot_imgspot_img
spot_imgspot_img

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಕಾಮುಕರು ಅರೆಸ್ಟ್!

- Advertisement -
- Advertisement -

ಬೆಳಗಾವಿ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಜಮೀನಿಗೆ ಹೋಗಿದ್ದ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದು, ಈ ಕೃತ್ಯದ ಬಗ್ಗೆ ದೂರು ದಾಖಲಿಸದಂತೆ ಸಂತ್ರಸ್ತೆ ಹಾಗೂ ಆಕೆಯ ಕುಟುಂಬದ ಮೇಲೆ ಒತ್ತಡ ಹೇರಿದ್ದರು. ಆದರೂ ಸಂತ್ರಸ್ತೆ ದೂರು ದಾಖಲಿಸಿದ್ದಳು.

ದೂರು ದಾಖಲಾದ ಅರ್ಧ ದಿನದಲ್ಲೇ ಪೊಲೀಸರು ವಿಶೇಷ ತಂಡ ರಚಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!