Monday, April 29, 2024
spot_imgspot_img
spot_imgspot_img

ಉಡುಪಿ: ಡಾಕ್ಟರ್ ಎಂದು ನಂಬಿಸಿ ಮಲ್ಪೆಯ ಮಹಿಳೆಗೆ ಲಕ್ಷಾಂತರ ರೂ. ವಂಚನೆ

- Advertisement -G L Acharya panikkar
- Advertisement -

ಉಡುಪಿ, : ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆ ಒಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಮಲ್ಪೆ ನಿವಾಸಿ ವಿನಿತಾ ಎಂಬ ಮಹಿಳೆಗೆ ಜನವರಿ 24ರಂದು ವಾಟ್ಸಪ್ ನಲ್ಲಿ ವ್ಯಕ್ತಿಯೊಬ್ಬ ಪರಿಚಯ ಆಗಿದ್ದು ನಿಮ್ಮ ಬಿಸಿನೆಸ್ನಲ್ಲಿ ಪಾಲುದಾರಿಕೆ ಮಾಡ್ತೀನಿ ಎಂದಿದ್ದ. ಅಲ್ಲದೆ, ತಾನು ಲಂಡನ್ನಲ್ಲಿ ಡಾಕ್ಟರ್ ಆಗಿದ್ದು, ಸದ್ಯದಲ್ಲೇ ಭಾರತಕ್ಕೆ ಬರಲು ಪ್ಲಾನ್ ಮಾಡಿಕೊಂಡಿದ್ದೇನೆ ಎಂದು ಹೇಳಿಕೊಂಡಿದ್ದ. ಫೆ.2ರಂದು ಬೇರೊಂದು ನಂಬರಲ್ಲಿ ಫೋನ್ ಬಂದಿತ್ತು. ದೆಹಲಿ ಏರ್ಪೋರ್ಟ್‌ ಕಚೇರಿಯಿಂದ ಫೋನ್ ಮಾಡುತ್ತಿದ್ದೇನೆಂದು ಹೇಳಿದ್ದ ಆ ವ್ಯಕ್ತಿ, ಲಂಡನ್ ಡಾಕ್ಟರಿನ ಫ್ರೆಂಡ್ ಎಂದು ಹೇಳಿದ್ದ. ಡಾಕ್ಟರನ್ನು ಏರ್ಪೋರ್ಟ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅವರನ್ನು ಬಿಡಿಸಿ ತರಲು ದಂಡ ಕಟ್ಟಬೇಕಾಗಿದೆ. ಎಂದಿದ್ದ.

ಆ ನಂತರವೂ ಫೋನ್ ಬಂದಿದ್ದು, ಡಾಕ್ಟರ್ ಏರ್ಪೋರ್ಟ್‌ ಲ್ಲಿ ಸಿಕ್ಕಿಬಿದ್ದಿದ್ದಾರೆ. ದಂಡ ಕಟ್ಟಲು ಹಣ ಇಲ್ಲ, ಸಹಾಯ ಮಾಡಬಹುದೇ ಎಂದು ಆ ವ್ಯಕ್ತಿ ಕೇಳಿಕೊಂಡಿದ್ದ. ಅದರಂತೆ, ವಿನಿತಾ ಅವರು ಫೆ.16ರಿಂದ 20ರ ನಡುವೆ ತನ್ನ ಕೆನರಾ ಬ್ಯಾಂಕ್ ಖಾತೆಯಿಂದ ಫೋನ್ ಪೇ ಮೂಲಕ 4.96 ಲಕ್ಷ ರೂ. ಹಣ ಕಳಿಸಿದ್ದರು. ಹಣ ಕಳಿಸಿದ ಬಳಿಕ ಫೋನ್ ಸಂಪರ್ಕ ಕಡಿತ ಆಗಿತ್ತು. ಇದರಿಂದ ಮೋಸದ ಅರಿವಾದ ಮಹಿಳೆ ಮಲ್ಪೆ ಠಾಣೆಯಲ್ಲಿ ದೂರು ನೀಡಿದ್ದಾರೆ.

- Advertisement -

Related news

error: Content is protected !!