Saturday, June 28, 2025
spot_imgspot_img
spot_imgspot_img

ಉಡುಪಿ : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ಸಾವಿರಾರು ರೂ. ವಂಚನೆ

- Advertisement -
- Advertisement -

ಉಡುಪಿ : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯಿಂದ ಹಣ ಪಡೆದು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪುಷ್ಪಾ ಎಂಬವರು ವಿದೇಶದಲ್ಲಿ ಉದ್ಯೋಗ ಪಡೆಯಲು ವೆಬ್ಟ್‌ವೊಂದರಲ್ಲಿ ನಲ್ಲಿ ಆನ್ ಲೈನ್ ಮುಖೇನಾ ಅರ್ಜಿ ಸಲ್ಲಿಸಿದ್ದರು. ಆ ಬಳಿಕ ಮೊಬೈಲ್ ಗೆ ಈ-ಮೇಲ್ ಸಂದೇಶ ಬಂದಿದ್ದು ಸಂದೇಶದಲ್ಲಿರುವ ಮೊಬೈಲ್ ಸಂಖ್ಯೆಗೆ ಕರೆ ಮಾಡಿದಾಗ ಆರೋಪಿಗಳು ವಿದೇಶದಲ್ಲಿ ಉದ್ಯೋಗ ಕೊಡುವುದಾಗಿ ನಂಬಿಸಿ ವೀಸಾ ಪ್ರೋಸೆಸ್, ಮೆಡಿಕಲ್ ಫಿಟ್‌ನೆಸ್ ಮುಂತಾದ ಕಾರಣ ನೀಡಿ ಕ್ಯೂ ಆರ್ ಕೋಡ್ ಗಳನ್ನು ಸ್ಕ್ಯಾನ್ ಮಾಡಿ ಗೂಗಲ್ ಪೇ ಯಲ್ಲಿ ಹಂತ ಹಂತವಾಗಿ ಒಟ್ಟು ರೂ. 80,070/- ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಆದರೆ ಬಳಿಕ ಆರೋಪಿಗಳು ವಿದೇಶದಲ್ಲಿ ಉದ್ಯೋಗವನ್ನು ನೀಡದೇ, ಪಡೆದ ಹಣವನ್ನು ಹಿಂತಿರುಗಿಸದೇ ವಂಚಿಸಿರುವುದಾಗಿ ನೀಡಿದ ದೂರಿನಂತೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!