- Advertisement -
- Advertisement -



ಬಳ್ಳಾರಿ: ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು ಮನೆ ಸಂಪೂರ್ಣವಾಗಿ ನೆಲಸಮವಾಗಿರುವ ಘಟನೆ ಇಂದು(ಮಾ.02) ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾಳೂರು ಗ್ರಾಮದಲ್ಲಿ ನಡೆದಿದೆ. ಸಂಡೂರು ತಾಲೂಕಿನ ತಾಳೂರು ಗ್ರಾಮದ ಸುಬಾನಿ ಸಾಬ್ ಎಂಬುವವರ ಮನೆಯಲ್ಲಿ ಹೊಸದಾಗಿ ತಂದಿದ್ದ ಗ್ಯಾಸ್ ಸಿಲಿಂಡರ್ ಅನ್ನು ಅಡುಗೆಗೆ ಜೋಡಿಸುವ ಸಂದರ್ಭದಲ್ಲಿ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿಸಿದೆ. ಗ್ಯಾಸ್ ಲೀಕ್ ಆಗುತ್ತಿದ್ದಂತೆ ಮನೆಯಲ್ಲಿದ್ದ ಕುಟುಂಬಸ್ಥರು ಎಚ್ಚೆತ್ತು ಹೊರಬಂದ ಕಾರಣ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸ್ಪೋಟದ ತೀವ್ರತೆಗೆ ಮನೆ ಸಂಪೂರ್ಣವಾಗಿ ಛಿದ್ರಗೊಂಡಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲವೂ ನಾಶವಾಗಿವೆ. ಸ್ಫೋಟದ ರಭಸಕ್ಕೆ ಪಕ್ಕದ ಮನೆಯ ಗೋಡೆಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ.ಮನೆ ಮಾಲೀಕ ಸುಬಾನಿ ಸಾಬ್ ಸೇರಿದಂತೆ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ತೋರಣಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
- Advertisement -








