Friday, July 31, 2026
spot_imgspot_img
spot_imgspot_img

ಬಳ್ಳಾರಿ: ಜನಾರ್ದನ ರೆಡ್ಡಿ ಮಾಡೆಲ್‌ ಮನೆಗೆ ಬೆಂಕಿ; ಎಫ್‌ಐಆರ್ ದಾಖಲು

- Advertisement -
- Advertisement -

ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಬಿ. ಶ್ರೀರಾಮುಲುಗೆ ಸೇರಿದ ಜಿ-ಸ್ಟಾರ್ ಲೇಔಟ್‌ನಲ್ಲಿರುವ ಮಾಡೆಲ್‌ ಮನೆಗೆ ಬೆಂಕಿ ಹಚ್ಚಲಾಗಿದ್ದು, ಈ ಕೃತ್ಯಕ್ಕೆ ಕಾಂಗ್ರೆಸ್ ಕಾರ್ಯಕರ್ತರೇ ಕಾರಣ ಎಂದು ಆರೋಪಿಸಿ, ಪ್ರಕರಣ ರಾಜ್ಯ-ರಾಜಕೀಯದಲ್ಲಿ ಹೊಸ ಕೋಲಾಹಲಕ್ಕೆ ಕಾರಣವಾಗಿದೆ.

ಈ ಸಂಬಂಧ ಜನಾರ್ದನ ರೆಡ್ಡಿ ಅವರ ಸೈಟ್ ಇಂಜಿನಿಯರ್ ರಿಜ್ವಾನ್ ನೀಡಿದ ದೂರಿನ ಆಧಾರದಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಗುಂಪು-ಗುಂಪಾಗಿ ಬಂದು ಬೆಂಕಿ ಹಚ್ಚಿದ ಆರೋಪದ ದೂರಿನ ಪ್ರಕಾರ, ಸುಮಾರು 8ರಿಂದ 10 ಜನ ದುಷ್ಕರ್ಮಿಗಳು ಸ್ಥಳಕ್ಕೆ ಆಗಮಿಸಿ ಮಾದರಿ ಮನೆಯ ಬಾಗಿಲು ಹಾಗೂ ಕಿಟಕಿಗಳನ್ನು ಧ್ವಂಸಗೊಳಿಸಿದ್ದಾರೆ. ಕಿಟಕಿಯ ಗಾಜುಗಳನ್ನು ಒಡೆದು ಹಾಕಿದ ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಈ ಅವಘಡದಲ್ಲಿ ಮನೆಯೊಳಗಿದ್ದ ಸುಮಾರು ರೂ.1 ಕೋಟಿ 25 ಲಕ್ಷ ಮೌಲ್ಯದ ಪರಿಕರಗಳು ಸಂಪೂರ್ಣವಾಗಿ ಸುಟ್ಟು ನಾಶವಾಗಿವೆ ಎಂದು ತಿಳಿದುಬಂದಿದೆ. 73 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಮಾಡೆಲ್‌ ಮನೆ : ಕಂಟೋನ್ಮೆಂಟ್ ಪ್ರದೇಶದಲ್ಲಿರುವ ತಮ್ಮ ಮಾಲೀಕತ್ವದ ಜಿ-ಸ್ಟಾರ್ ಲೇಔಟ್‌ನಲ್ಲಿ ಜನಾರ್ದನ ರೆಡ್ಡಿ ಅವರು ಸುಮಾರು ರೂ. 73 ಕೋಟಿ ವೆಚ್ಚದಲ್ಲಿ ಈ ಮಾದರಿ ಮನೆ ನಿರ್ಮಿಸಿದ್ದರು. ಲೇಔಟ್‌ನಲ್ಲಿನ ಮನೆಗಳ ವಿನ್ಯಾಸವನ್ನು ಗ್ರಾಹಕರಿಗೆ ಪ್ರದರ್ಶಿಸುವ ಉದ್ದೇಶದಿಂದ ಈ ಮನೆ ನಿರ್ಮಿಸಲಾಗಿತ್ತು. ಶುಕ್ರವಾರ ಸಂಜೆ ದುಷ್ಕರ್ಮಿಗಳ ಕೃತ್ಯದಿಂದಾಗಿ ಆಸ್ತಿ ನಷ್ಟವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿ, ಸಿಸಿಟಿವಿ ದೃಶ್ಯಗಳು ಮತ್ತು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲಾಗುತ್ತಿದೆ.

- Advertisement -

Related news

error: Content is protected !!