Tuesday, July 21, 2026
spot_imgspot_img
spot_imgspot_img

ಬಳ್ಳಾರಿ: ಭೀಕರ ಸರಣಿ ಅಪಘಾತ – ಇಬ್ಬರು ಮೃತ್ಯು

- Advertisement -
- Advertisement -

ಬಳ್ಳಾರಿ: ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಇದರ ಪರಿಣಾಮ ಇಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಬೆಳ್ಳುಳ್ಳಿ ಸಾಗಾಟ ಮಾಡುತ್ತಿದ್ದ ಲಾರಿ ಹೊಸಪೇಟೆ ಹೊರವಲಯದ ಟನಲ್‌ನಿಂದ ಡಣಾಪುರದವರೆಗೆ ಬೈಕ್, ಕಾರು ಹಾಗೂ ಬಸ್‌ಗೆ ಹೊಡೆದುಕೊಂಡು ಹೋಗಿದೆ. ಅಪಘಾತದ ರಭಸಕ್ಕೆ ಒಂದು ಕಾರು ಅಪ್ಪಚ್ಚಿಯಾಗಿದೆ.

ಘಟನಾ ಸ್ಥಳಕ್ಕೆ ವಿಜಯನಗರ ಎಸ್ಪಿ ಜಾಹ್ನವಿ ಎಸ್ ಹಾಗೂ ಮರಿಯಮ್ಮನ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಕೆಲವರಿಗೂ ಗಾಯಗಳಾಗಿದ್ದು, ಗಾಯಾಳುಗಳನ್ನು ಹೊಸಪೇಟೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!