Monday, June 8, 2026
spot_imgspot_img
spot_imgspot_img

ಬೆಳ್ತಂಗಡಿ: ಬಸ್ ಮತ್ತು ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ಮೃತ್ಯು!

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪ ಪಿಲ್ಯ ಎಂಬಲ್ಲಿ ಬಸ್ ಮತ್ತು ಆಟೋ ನಡುವೆ ಗುರುವಾರ ರಾತ್ರಿ ಅಪಘಾತ ನಡೆದಿದ್ದು, ಆಟೋ ಚಾಲಕ‌ ಮೃತಪಟ್ಟಿದ್ದಾರೆ.

ಅಪಘಾತದಿಂದ ಆಟೋ ಚಾಲಕನ‌ ತಲೆ‌ ಮತ್ತು ಮುಖಕ್ಕೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು. ಸ್ಥಿತಿ ಗಂಭೀರವಾಗಿದ್ದುದರಿಂದ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬಲವಾದ ಹೊಡೆತ ಬಿದ್ದಿದ್ದರಿಂದ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಅಪಘಾತಕ್ಕೆ ಸಿಲುಕಿದ ರಭಸಕ್ಕೆ ಆಟೋ ರಿಕ್ಷಾ ಪೂರ್ತಿ ಜಖಂಗೊಂಡಿದೆ. ಅಪಘಾತದ ಸ್ಥಳದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಟ್ರಾಫಿಕ್ ಜಾಮ್ಉಂಟಾಗಿ ಸಂಚಾರ ಅಸ್ತವ್ಯಸ್ಥವಾಯಿತು. ಆಟೋ ರಿಕ್ಷಾ ಶಿರ್ತಾಡಿಯದ್ದು ಎಂದು ತಿಳಿದು ಬಂದಿದ್ದು ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ.

- Advertisement -

Related news

error: Content is protected !!