Friday, July 11, 2025
spot_imgspot_img
spot_imgspot_img

ಬೆಳ್ತಂಗಡಿ: ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಗೂಂಡಾಗಿರಿ; ಪೊಲೀಸರ ಎದುರೇ ವ್ಯಕ್ತಿ ಮೇಲೆ ಹಲ್ಲೆ- ಮೂವರು ಆರೋಪಿಗಳ ಬಂಧನ

- Advertisement -
- Advertisement -

ಬೆಳ್ತಂಗಡಿ: ವಿದ್ಯಾರ್ಥಿಗಳು ಗೂಂಡಾಗಿರಿ ನಡೆಸಿದ್ದು, ಪೊಲೀಸರ ಎದುರೇ ವ್ಯಕ್ತಿಯೋರ್ವನಿಗೆ ಹಲ್ಲೆ ಮಾಡಿದ್ದ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಂಡಕ್ಟರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಉಜಿರೆಯಿಂದ ಚಾರ್ಮಾಡಿಗೆ ಬಸ್ ನಲ್ಲಿ ವಿದ್ಯಾರ್ಥಿಗಳ ಗುಂಪು ಪ್ರಯಾಣ ಬೆಳೆಸುತ್ತಿತ್ತು. ಈ ವೇಳೆ ಚಾರ್ಮಾಡಿ ಬಳಿ ಬಸ್ ನಿಲ್ಲಿಸಲು ವಿದ್ಯಾರ್ಥಿಗಳು ಸೂಚಿಸಿದ್ದರು. ಆದರೆ ವೇಗದೂತ ಬಸ್ ಆಗಿರುವ ಕಾರಣ ಸಿಕ್ಕಸಿಕ್ಕಲ್ಲಿ ಬಸ್ ನಿಲ್ಲಿಸಲು ಸಾಧ್ಯವಿಲ್ಲ ಎಂದು ಬಸ್ ಕಂಡಕ್ಟರ್ ಹೇಳಿದ್ದ ಎನ್ನಲಾಗಿದೆ. ಈ ವೇಳೆ ವಿದ್ಯಾರ್ಥಿಗಳು ಮತ್ತು ಕಂಡಕ್ಟರ್ ನಡುವೆ ನಡೆದ ವಾಗ್ವಾದ ನಡೆದಿದೆ. ಕಂಡಕ್ಟರ್ ಮಾತಿಗೆ ಬಸ್ ನಲ್ಲಿದ್ದ ಪ್ರಯಾಣಿಕರೊಬ್ಬರು ಬೆಂಬಲ ಸೂಚಿಸಿದ್ದರು. ಈ ವೇಳೆ ಪ್ರಯಾಣಿಕನ ಮೇಲೆ‌ ಮುಗಿಬಿದ್ದ ವಿದ್ಯಾರ್ಥಿಗಳು ಬೇರೆ ಯುವಕರನ್ನು ಕರೆಸಿ ಬಸ್ ಅಡ್ಡ ಹಾಕಿ ದಾಂಧಲೆ ಮೆರೆದಿದ್ದಾರೆ.

ಪೊಲೀಸರ ಎದುರೇ ದಾಂಧಲೆ ಮಾಡಿದ ವಿದ್ಯಾರ್ಥಿಗಳು, ಮಹಿಳೆಯರ ಎದುರೇ ಅವ್ಯಾಚ್ಯ ಶಬ್ಧಗಳಿಂದ ಪ್ರಯಾಣಿಕನಿಗೆ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಗಳ ಗೂಂಡಾಗಿರಿ ದೃಶ್ಯವನ್ನು ಮೊಬೈಲ್ ನಲ್ಲಿ ಬಸ್ ಪ್ರಯಾಣಿಕರು ಚಿತ್ರೀಕರಿಸಿದ್ದಾರೆ

ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಧರ್ಮಸ್ಮಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಕರಣದಲ್ಲಿ ಭಾಗಿಯಾದ ಮೂರು ಜನ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮೇಗಿನ ಮನೆ ನಿವಾಸಿ ಅಬೂಬಕ್ಕರ್ ಅವರ ಮಗ ಮಹಮ್ಮದ್ ಶಬೀರ್(21) ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮೇಗಿನ ಮನೆ ನಿವಾಸಿ ಅಬೂಬಕ್ಕರ್ ಅವರ ಮಗ ಮಹಮ್ಮದ್‌ ಮಹಾರೂಫ್ (22), ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಪಾಂಡಿಕಟ್ಟೆ ನಿವಾಸಿ ಮೊಹಮ್ಮದ್ ಅವರ ಮಗ ಮಹಮ್ಮದ್ ಮುಬಶೀರ್ (23) ಎಂಬವರನ್ನು ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ನೇತೃತ್ವದ ತಂಡ ಜೂನ್ 18 ರಂದು ರಾತ್ರಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!