Sunday, August 2, 2026
spot_imgspot_img
spot_imgspot_img

ಬೆಳ್ತಂಗಡಿ: ಹೆತ್ತ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಮನೆಮಂದಿ ಪರಾರಿ!

- Advertisement -
- Advertisement -

ಬೆಳ್ತಂಗಡಿ: ಕಳಿಯ ಗ್ರಾಮದ ನಾಳ ಎಂಬಲ್ಲಿ ಹೆತ್ತ ತಾಯಿಯನ್ನು ಅವರ ಮನೆಯವರೇ ರಸ್ತೆ ಬದಿ ಬಿಟ್ಟುಹೋಗಿರುವ ಅಮಾನವೀಯ‌ ಘಟನೆ ನಡೆದಿದೆ.

ವೃದ್ಧೆಗೆ‌ 5‌ ಮಕ್ಕಳಿದ್ದು, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಒಬ್ಬ ಪುತ್ರ ಮಂಗಳೂರಿನಲ್ಲಿ ಪೊಲೀಸ್ ಆಗಿ ಕರ್ತವ್ಯ ‌ನಿರ್ವಹಿಸುತ್ತಿದ್ದಾರೆ. ಇನ್ನಿಬ್ಬರು ಪುತ್ರರು ಮೇಸ್ತ್ರಿ ಕೆಲಸ ಮಾಡುತ್ತಿದ್ದಾರೆ. ಪುತ್ರಿಯರಲ್ಲಿ ಒಬ್ಬರು ಗೃಹಿಣಿಯಾಗಿದ್ದು, ಮತ್ತೊಬ್ಬರು ಆಶಾ ಕಾರ್ಯಕರ್ತೆಯಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಇನ್ನು ಬೀದಿಯಲ್ಲಿದ್ದ ವೃದ್ದೆಯನ್ನು ಗಮನಿಸಿದ ಸಾರ್ವಜನಿಕರು ದ.ಕ. ಜಿಲ್ಲಾ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ತುರ್ತು ಸ್ಪಂದನಾ ವಾಹನ ಸ್ಥಳಕ್ಕೆ ತೆರಳಿ ವೃದ್ಧೆಯನ್ನು ರಕ್ಷಣೆ ಮಾಡಿದ್ದಾರೆ.
ಸದ್ಯ ವೃದ್ಧ ತಾಯಿಯನ್ನು ಅವರ ಪುತ್ರಿಯ ಮನೆಗೆ ಕಳುಹಿಸಲಾಗಿದೆ.

ಇನ್ನು ಸೂಕ್ತ ಕಾನೂನು ಕ್ರಮಕ್ಕಾಗಿ ಪ್ರಕರಣವನ್ನು ಬೆಳ್ತಂಗಡಿ ಠಾಣೆಗೆ ಹಸ್ತಾಂತರಿಸಲಾಗಿದೆ. ವೃದ್ದೆಯನ್ನು ಬೀದಿಪಾಲು ಮಾಡಿದ್ದ ಮನೆಯವರ ವಿರುದ್ಧ ಸೂಕ್ತ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!