Sunday, June 21, 2026
spot_imgspot_img
spot_imgspot_img

ಬೆಳ್ತಂಗಡಿ: ಮನೆಗೆ ನುಗ್ಗಿದ ಕಳ್ಳರು: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು, ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಮನೆಯ ಬಾಗಿಲಿಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಕಳವು ನಡೆದಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಕನ್ಯಾಡಿ ನಿವಾಸಿ ಜಯಶ್ರೀ (32) ಅವರು ನೀಡಿದ ದೂರಿನಂತೆ, ಅವರು ಜೂನ್ 20ರಂದು ಬೆಳಿಗ್ಗೆ ಮನೆಗೆ ಬೀಗ ಹಾಕಿ, ಕೀಯನ್ನು ಮನೆಯ ಬಳಿಯೇ ಇಟ್ಟು ಕೆಲಸಕ್ಕೆ ತೆರಳಿದ್ದರು. ಸಂಜೆ ಮನೆಗೆ ಹಿಂತಿರುಗಿ ಬಂದಾಗ ಮನೆಯ ಕೋಣೆಯಲ್ಲಿದ್ದ ಗಾದ್ರೇಜ್‌ ಬಾಗಿಲು ತೆರೆದಿರುವುದು ಹಾಗೂ ಕೋಣೆಯೊಳಗಿನ ವಸ್ತುಗಳು ಚಲ್ಲಾಪಿಲ್ಲಿಯಾಗಿರುವುದು ಕಂಡುಬಂದಿದೆ.

ಪರಿಶೀಲನೆ ನಡೆಸಿದಾಗ ಮನೆಯಲ್ಲಿ ಇರಿಸಿದ್ದ ಸುಮಾರು 60 ಗ್ರಾಂ ತೂಕದ ಬಂಗಾರದ ಆಭರಣಗಳು ಕಳವಾಗಿರುವುದು ಬೆಳಕಿಗೆ ಬಂದಿದ್ದು, ಕಳವಾದ ಚಿನ್ನಾಭರಣಗಳ ಅಂದಾಜು ಮೌಲ್ಯ ರೂ. 7,98,000 ಎಂದು ತಿಳಿದುಬಂದಿದೆ.

ಈ ಕುರಿತು ಮಹಿಳೆ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 70/2026, ಕಲಂ 331(3), 305 ಬಿ.ಎನ್.ಎಸ್. ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!