Saturday, June 13, 2026
spot_imgspot_img
spot_imgspot_img

ಬೆಳ್ತಂಗಡಿ : ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು – ಮೂವರಿಗೆ ಗಾಯ

- Advertisement -
- Advertisement -

ಬೆಳ್ತಂಗಡಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.

ಮೂವರು ಪ್ರಯಾಣಿಕರು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಆಳವಾದ ಚರಂಡಿಗೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು ಇವರನ್ನು ಸ್ಥಳೀಯರ ಸಹಕಾರದೊಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!