Monday, June 15, 2026
spot_imgspot_img
spot_imgspot_img

ಬೆಳ್ತಂಗಡಿ: ಚಿಕಿತ್ಸೆಗೆಂದು ಕರೆತಂದಿದ್ದ 45ದಿನದ ಹೆಣ್ಣುಮಗು ಸಾವು; ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ- ಕುಟುಂಸ್ಥರ ಆರೋಪ

- Advertisement -
- Advertisement -

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಿದ್ದ 45ದಿನದ ಹೆಣ್ಣುಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಳಿಕಾರು ನಿವಾಸಿಯಾಗಿರುವ ಬಾಲಕೃಷ್ಣ-ಸವಿತಾ ದಂಪತಿ ತಮ್ಮ 45ದಿನದ ಮಗುವಿಗೆ ಕಫ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳವಾರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ರಾತ್ರಿಯ ವೇಳೆಗೆ ಮಗು ಮೃತಪಟ್ಟಿದ್ದು ಮಗು ಸಾವನ್ನಪ್ಪಲು ಆಸ್ಪತ್ರೆಯವರ ನಿರ್ಲಕ್ಷ್ಯ ಕಾರಣ ಎಂಬ ಆರೋಪ ಮನೆಯವರಿಂದ ಕೇಳಿಬಂದಿದೆ.

ಆಸ್ಪತ್ರೆಗೆ ಮಾಜಿ ಶಾಸಕ ಕೆ. ವಸಂತ ಬಂಗೇರ ಭೇಟಿ ನೀಡಿ ಮೃತಪಟ್ಟ ಮಗುವಿನ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿರುವ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಘಟನೆಯ ಬಗ್ಗೆ ಸರಿಯಾದ ರೀತಿಯಲ್ಲಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Insta: glacharyajewellers
Fb: glacharya
- Advertisement -

Related news

error: Content is protected !!