Sunday, June 14, 2026
spot_imgspot_img
spot_imgspot_img

ಬೆಳ್ತಂಗಡಿ: ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣ; ವಿಚಾರಣಾಧೀನ ಕೈದಿ ಆಸ್ಪತ್ರೆಯಲ್ಲಿ ಸಾವು..!!

- Advertisement -
- Advertisement -

ಬೆಳ್ತಂಗಡಿ : 2022ನೇ ಜುಲೈ 23 ರಂದು ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಬಡಿದು ಕೊಂದು ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಕಾನರ್ಪ ನಿವಾಸಿ ಅಶೋಕ ಗೌಡ (35ವ) ಅನಾರೋಗ್ಯದಿಂದ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿ ಚಿನ್ನಾಭರಣಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದ ಆತನನ್ನು ಬಂಧಿಸಿದ ಪೊಲೀಸರು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮಂಗಳೂರು ಸಬ್ ಜೈಲಿಗೆ ಅಟ್ಟಲಾಗಿತ್ತು.

ದುಶ್ಚಟಗಳಿಗೆ ದಾಸನಾಗಿದ್ದ ಆರೋಪಿ ಟಿ.ಬಿ. ಹಾಗೂ ಶುಗರ್ ಸಮಸ್ಯೆಯಿಂದ ಬಳಲುತ್ತಿದ್ದು, ಆತನನ್ನು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಆತನು ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!