Saturday, June 13, 2026
spot_imgspot_img
spot_imgspot_img

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!

- Advertisement -
- Advertisement -

ಬೆಳ್ತಂಗಡಿ : ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಸೋಮವಾರ (ಡಿ.02) ಸಂಜೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ‌ ರಾತ್ರಿ ಮೃತದೇಹ ಹೊರತೆಗೆಯಲಾಗಿದೆ.

ಮೃತಪಟ್ಟವರನ್ನು ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂದು ಗುರುತಿಸಲಾಗಿದೆ. ಇವರು ಯಾವುದೋ ಕಾರಣಕ್ಕೆ ಸಂಜೆ‌ ಸುಮಾರು 5‌‌ರಿಂದ‌ 6 ಗಂಟೆ ಸುಮಾರಿಗೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದರು.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಗೂ ಮಾಹಿತಿ‌‌‌ ನೀಡಲಾಗಿತ್ತು. ಆದರೆ ಮುಳುಗು ತಜ್ಞ ಬೆಳ್ತಂಗಡಿ‌ಯ‌ ಸಂಜಯ ನಗರದ ಇಸ್ಮಾಯಿಲ್‌ ಹಾಗೂ ಅಗ್ನಿಶಾಮಕದಳದವರು ರಾತ್ರಿ‌11‌ರ‌ ಸುಮಾರಿಗೆ ಮೃತದೇಹ ಮೇಲೆತ್ತಿದ್ದಾರೆ. ಮೃತ ವ್ಯಕ್ತಿ ಸಂಘದ ಪ್ರಚಾರಕರಾಗಿ ಐದು ವರ್ಷ ಕಾರ್ಯನಿರ್ವಹಿಸಿ ಪ್ರಸ್ತುತ ಪುತ್ತೂರು ಜಿಲ್ಲಾ ಧರ್ಮಜಾಗರಣ ಸಂಯೋಜಕರಾಗಿದ್ದರು. ಪಾರ್ಥೀವ ಶರೀರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶ*ವಾಗಾರದಲ್ಲಿ ಇರಿಸಲಾಗಿದೆ.

- Advertisement -

Related news

error: Content is protected !!