Friday, June 19, 2026
spot_imgspot_img
spot_imgspot_img

ಬೆಳ್ತಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

- Advertisement -
- Advertisement -

ಬೆಳ್ತಂಗಡಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಬಸ್ಸಿನಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಲಾಯಿಲ ನಿವಾಸಿ ತಾಜ್ ಬಾವುಂಞ (57) ಎಂದು ಗುರುತಿಸಲಾಗಿದ್ದು, ಲಾಯಿಲನೂರುಲ್ ಹುದಾ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ಇದರ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತಿದ್ದರು. ನಿನ್ನೆ ಬೆಳಿಗ್ಗೆ ಕೆಲಸಕ್ಕೆಂದು ತಾಜ್ ಬಾವುಂಞ ಮಂಗಳೂರಿಗೆ ತೆರಳಿದ್ದು, ನಿನ್ನೆ ಸಂಜೆ ಮನೆಗೆ ಬಸ್ಸಿನಲ್ಲಿ ಮರಳುತ್ತಿದ್ದ ಸಂದರ್ಭ ಮಂಗಳೂರಿನ ಪಡೀಲ್ ಬಳಿ ಬಸ್ಸಿನಲ್ಲಿಯೇ ಹೃದಯಾಘಾತದಿಂದ ಕುಸಿದು ಬಿದ್ದ ಘಟನೆ ನಡೆದಿದೆ.

ಈ ವೇಳೆ ಬಸ್ಸಿನಲ್ಲಿದ್ದ ಕಂಡೆಕ್ಟರ್ ಜೊತೆಗೆ ಬಸ್ಸಿನಲ್ಲಿದ್ದವರು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದು, ಆದರೆ ಆಸ್ಪತ್ರೆಗೆ ದಾಖಲು ಮಾಡಲು ಮುಂದಾದ ಸಂದರ್ಭ ತಾಜ್ ಬಾವುಂಞ ಅವರನ್ನು ವೈದ್ಯರು ಪರೀಕ್ಷಿಸಿ ಅವರ ಪ್ರಾಣ ಪಕ್ಷಿ ಹಾರಿ ಹೋಗಿದ್ದನ್ನು ದೃಢ ಪಡಿಸಿದ್ದಾರೆ. ಲಾಯಿಲದ ಅವರ ಪರಿಚಯದವರೊಬ್ಬರು ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಿನ್ನೆಲೆ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಮೃತರು ಪತ್ನಿ, ಮೂವರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!