Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

- Advertisement -
- Advertisement -

ಬೆಳ್ತಂಗಡಿ: ಇಲಿ ಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬಳಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಎಂದು ಗುರುತಿಸಲಾಗಿದೆ.

ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಈಕೆ ಪ್ರಸ್ತುತ ಬೆಳ್ತಂಗಡಿಯ ಖಾಸಗಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದು ಮನೆಯವರಿಗೆ ಕಷ್ಟ ಕೊಡಲು ನನ್ನಿಂದ ಆಗಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!