Sunday, June 14, 2026
spot_imgspot_img
spot_imgspot_img

ಬೆಳ್ತಂಗಡಿ: ನದಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತ್ಯು..!

- Advertisement -
- Advertisement -

ಬೆಳ್ತಂಗಡಿ: ನದಿಗೆ ಇಳಿದಿದ್ದ ಯುವಕನೋರ್ವ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ನೆರಿಯ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಯುವಕ ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ.

ಈತ ಭಾನುವಾರ ಗೆಳೆಯರೊಂದಿಗೆ ಮೀನು ಹಿಡಿಯಲು ನೆರಿಯ ಗ್ರಾಮದ ಎಸ್ಟೇಟ್ ಒಂದರ ಸಮೀಪ ನದಿಗೆ ಹೋಗಿದ್ದ ಎನ್ನಲಾಗಿದೆ. ನದಿಯಲ್ಲಿ ಸಂಜೆಯ ವೇಳೆ ಈತ ನಾಪತ್ತೆಯಾಗಿದ್ದ ಈತನಿಗಾಗಿ ಸ್ಥಳೀಯರ ನೇತೃತ್ವದಲ್ಲಿ ನಡೆಸಿದ ಹುಡುಕಾಟದಲ್ಲಿ ಮೃತದೇಹ ಪತ್ತೆಯಾಗಿದೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!