- Advertisement -
- Advertisement -




ಬೆಳ್ತಂಗಡಿ: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಕಳಿಯ ಗ್ರಾಮದ ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ (26) ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಗೇರುಕಟ್ಟೆ ಪಕ್ಕದ ಅಂಗಡಿಯೊಂದರಲ್ಲಿ ಕೆಲಸ ಮಾಡಿ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದರು. ಬೆಳಿಗ್ಗೆ ತಡವಾದರೂ, ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ. ಮನೆಯವರು ಬಂದು ನೋಡಿ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
- Advertisement -








