Tuesday, June 9, 2026
spot_imgspot_img
spot_imgspot_img

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್‌ ಪಲ್ಟಿ; ಚಾಲಕ ಮೃತ್ಯು..!!

- Advertisement -
- Advertisement -

ಬೆಳ್ತಂಗಡಿ: ಆಂಬ್ಯುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ್ದ ಘಟನೆ ವಗ್ಗ ಬಳಿ ನಡೆದಿದೆ.

ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಮೃತಪಟ್ಟ ದುರ್ದೈವಿ.

ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಈ ವೇಳೆ ಚಾಲಕ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!