Tuesday, June 9, 2026
spot_imgspot_img
spot_imgspot_img

ಬೆಳ್ತಂಗಡಿ: ಬೈಕ್ ಮತ್ತು ಪಿಕಪ್ ವಾಹನ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು!

- Advertisement -
- Advertisement -

ಬೆಳ್ತಂಗಡಿ: ಸೋಮಂದಡ್ಕ ಗ್ರಾಮದ ಸೀಟ್ ಎಂಬಲ್ಲಿ ಶುಕ್ರವಾರ ಬೆಳಗ್ಗೆ ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಸುದೀಪ್ ಭಂಡಾರಿ(34) ಎಂದು ಗುರುತಿಸಲಾಗಿದೆ. ಬೈಕ್ ಸಹ ಸವಾರ ಕೂಡಾ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟ ಸುದೀಪ್ ಭಂಡಾರಿ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!